133
ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. ರಚನೆಗಾರ: ದಾವೀದ.
ಆಹಾ, ಸಹೋದರರು ಅನ್ಯೋನ್ಯತೆಯಿಂದಿರುವುದು
ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು.
ಅದು ಯಾಜಕನ ತಲೆಯ ಮೇಲೆ ಹಾಕಲ್ಪಟ್ಟು
ಆರೋನನ ಗಡ್ಡಕ್ಕೂ ಅಲ್ಲಿಂದ ಅವನ ಉಡುಪುಗಳ ಮೇಲೆಯೂ ಇಳಿದುಬರುವ ಪರಿಮಳ ತೈಲದಂತಿರುವುದು;
ಅದು ಹೆರ್ಮೋನ್ ಪರ್ವತದಿಂದ ಹುಟ್ಟಿ ಚೀಯೋನ್ ಪರ್ವತದ ಮೇಲೆ ಬೀಳುವ ದಟ್ಟವಾದ ಮಂಜಿನಂತಿರುವುದು.
ಯೆಹೋವನು ನಿತ್ಯಜೀವವೆಂಬ ತನ್ನ ಆಶೀರ್ವಾದವನ್ನು ಅನುಗ್ರಹಿಸಿದ್ದು ಚೀಯೋನಿನಲ್ಲಿಯೇ.