೬
ಸತ್ತು ಜೀವಿತನಾಗಿ ಎದ್ದ ಕ್ರಿಸ್ತನಲ್ಲಿ ಐಕ್ಯವಾದವರು
೧ ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು. ೨ * ರೋಮಾ. 3:8; 6:11; 7:4,6; ಗಲಾ. 2:19; ಕೊಲೊ. 2:20; 3:3; 1 ಪೇತ್ರ 2:24ಪಾಪದ ಪಾಲಿಗೆ ಸತ್ತವರಾದ ನಾವು ಇನ್ನು ಅದರಲ್ಲೇ ಬದುಕುವುದು ಹೇಗೆ? ೩ † ಗಲಾ. 3:27ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ? ೪ ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ‡ ಕೊಲೊ. 2:12ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ § ರೋಮಾ. 6:9; 8:11; ಅ. ಕೃ. 2:24ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು * 2 ಕೊರಿ. 5:17; ಗಲಾ. 15; ಎಫೆ. 4:23,24; ಕೊಲೊ. 3:10ನೂತನ ಜೀವದಲ್ಲಿ ನಡೆದುಕೊಳ್ಳಬೇಕು. ೫ ಹೇಗಂದರೆ ನಾವು ಆತನ ಮರಣಕ್ಕೆ † ಫಿಲಿ. 3:10,11ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು. ೬ ನಮಗೆ ತಿಳಿದಿರುವಂತೆ, ನಮ್ಮ ‡ ಎಫೆ. 4:22; ಕೊಲೊ. 3:9ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು § ಗಲಾ. 2:20; 5:24; 6:14ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ. ೭ * ರೋಮಾ. 6:18ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ. ೮ ಇದಲ್ಲದೆ † 2 ತಿಮೊ. 2:11; 2 ಕೊರಿ. 4:10; 13:4ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ. ೯ ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ‡ ಅ. ಕೃ. 13:34; ಪ್ರಕ. 1:18ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ. ೧೦ § ಇಬ್ರಿ. 7:27ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ, ೧೧ ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ * ರೋಮಾ. 6:2ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ.
ನಂಬಿದವರು ಪಾಪದ ದಾಸತ್ವದಿಂದ ಬಿಡುಗಡೆಯಾಗಿ ದೇವರಿಗೆ ದಾಸರಾಗುವರು
೧೨ ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ. ೧೩ ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ † ರೋಮಾ. 12:1ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ. ೧೪ ಯಾಕೆಂದರೆ ‡ ರೋಮಾ. 8:2; 12ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು § ನೇಮಗಳಿಗೆಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ. ೧೫ ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು * ರೋಮಾ. 6:1ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು. ೧೬ ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ † ರೋಮಾ. 6:20ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ ೧೭ ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ, ೧೮ ‡ ರೋಮಾ. 6:22; 8:2ಪಾಪದಿಂದ ಬಿಡುಗಡೆಯನ್ನು ಹೊಂದಿ § ರೋಮಾ. 6:22ನೀತಿಗೆ ದಾಸರಾದ್ದರಿಂದಲೂ ದೇವರಿಗೆ ಸ್ತೋತ್ರವಾಗಲಿ. ೧೯ ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು * ರೋಮಾ. 3:5ಲೋಕದ ರೀತಿಯಾಗಿ ಮಾತನಾಡುತ್ತೇನೆ. † ರೋಮಾ. 6:13 ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ. ೨೦ ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಗೆ ಒಳಗಾಗಿರಲಿಲ್ಲ. ೨೧ ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ‡ ರೋಮಾ. 7:5ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. § ರೋಮಾ. 1:32; 8:6, 13; ಜ್ಞಾ. 14:12; ಗಲಾ. 6:8ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ? ೨೨ ಈಗಲಾದರೋ ನೀವು * ರೋಮಾ. 6:18ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ † 1 ಕೊರಿ. 7:22; 1 ಪೇತ್ರ 2:16ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ. ೨೩ ಯಾಕೆಂದರೆ ‡ ರೋಮಾ. 5:12; 2:8ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
*೬:೨ ರೋಮಾ. 3:8; 6:11; 7:4,6; ಗಲಾ. 2:19; ಕೊಲೊ. 2:20; 3:3; 1 ಪೇತ್ರ 2:24
†೬:೩ ಗಲಾ. 3:27
§೬:೪ ರೋಮಾ. 6:9; 8:11; ಅ. ಕೃ. 2:24
*೬:೪ 2 ಕೊರಿ. 5:17; ಗಲಾ. 15; ಎಫೆ. 4:23,24; ಕೊಲೊ. 3:10
†೬:೫ ಫಿಲಿ. 3:10,11
§೬:೬ ಗಲಾ. 2:20; 5:24; 6:14
*೬:೭ ರೋಮಾ. 6:18
†೬:೮ 2 ತಿಮೊ. 2:11; 2 ಕೊರಿ. 4:10; 13:4
§೬:೧೦ ಇಬ್ರಿ. 7:27
*೬:೧೧ ರೋಮಾ. 6:2
†೬:೧೩ ರೋಮಾ. 12:1
‡೬:೧೪ ರೋಮಾ. 8:2; 12
§೬:೧೪ ನೇಮಗಳಿಗೆ
*೬:೧೫ ರೋಮಾ. 6:1
†೬:೧೬ ರೋಮಾ. 6:20
‡೬:೧೮ ರೋಮಾ. 6:22; 8:2
§೬:೧೮ ರೋಮಾ. 6:22
*೬:೧೯ ರೋಮಾ. 3:5
†೬:೧೯ ರೋಮಾ. 6:13
‡೬:೨೧ ರೋಮಾ. 7:5
§೬:೨೧ ರೋಮಾ. 1:32; 8:6, 13; ಜ್ಞಾ. 14:12; ಗಲಾ. 6:8
*೬:೨೨ ರೋಮಾ. 6:18
†೬:೨೨ 1 ಕೊರಿ. 7:22; 1 ಪೇತ್ರ 2:16
‡೬:೨೩ ರೋಮಾ. 5:12; 2:8